ನ್ಯೂಸ್

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಬಳಿಕ ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬುಧವಾರ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರ ಹಾಗೂ ರಾಜ್ಯ ನಾಯಕರ ರೂಟ್​ ಮ್ಯಾಪ್​ ಬಿಡುಗಡೆ ಮಾಡಿರಲಿಲ್ಲ.

ಇನ್ನು ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ಚುನಾವಣಾ ಪ್ರಚಾರ ಕಾರ್ಯಕ್ಕೆ ವೇಗ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ಧಾರೆ.

ಮೋದಿ ರಾಜ್ಯ ಪ್ರವಾಸ

ಇನ್ನು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಮಾರು 20ಕಡೆ ರ್‍ಯಾಲಿ ನಡೆಸಲಿದ್ದು ಕಾರ್ಯಕ್ರಮದ ರೂಪುರೇಷೆ ಹಾಗೂ ರೂಟ್​ ಮ್ಯಾಪ್​ ತಯಾರಿ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದ್ಧಾರೆ.

20 ಸ್ಥಳಗಳಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ರೋಡ್​ ಶೋ ಮತ್ತು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.