ನ್ಯೂಸ್

ಜೂನ್ 16, 17ರಂದು ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ

ನವದೆಹಲಿ: ದೇಶದಲ್ಲಿ ಕರೊನಾ ಪ್ರಕರಣಗಳು ದಿನೆ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಜೂನ್ 16 ಮತ್ತು 17ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಈ ವೇಳೆ ರಾಜ್ಯಗಳಲ್ಲಿನ ಕರೊನಾ ಪರಿಸ್ಥಿತಿ, ತೆಗೆದುಕೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕರೊನಾ ಪಸರಿಸುವಿಕೆ ತಡೆಗಟ್ಟಲು ಕಳೆದ ಮಾರ್ಚ್‌ನಲ್ಲಿ ಲಾಕ್‌ಡೌನ್ ೋಷಿಸಿದ ಬಳಿಕ ಈವರೆಗೆ ಮೋದಿ ಮುಖ್ಯಮಂತ್ರಿಗಳ ಜತೆ ನಾಲ್ಕು ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.