ನ್ಯೂಸ್

POCSO Case; 10 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಚಿತ

ಗಾಂಧಿನಗರ: ಗುಜರಾತ್‌ನ ಭರೂಚ್ ಜಿಲ್ಲೆಯ ಪನೋಲಿ ಗ್ರಾಮದಲ್ಲಿ 30 ವರ್ಷದ ವ್ಯಕ್ತಿಯೊಬ್ಬ 10 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆಯ ಮುಂದಿನ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವನ್ನು ಕರೆದುಕೊಂಡು ಹೋಗಿ ಆರೋಪಿ ಈ ಕೃತ್ಯ ಎಸಗಿದ್ದಾನೆ. ಆತನ ವಿರುದ್ಧ ಪೋಕ್ಸೋ ಪ್ರಕರಣ(POCSO Case) ದಾಖಲಾಗಿದೆ.

ಮಗುವಿನ ಅಳು ಕೇಳಿದ ಅಜ್ಜಿ ಘಟನಾ ಸ್ಥಳಕ್ಕೆ ಓಡಿಹೋಗಿದ್ದಾರೆ. ಅಧಿಕ ರಕ್ತಸ್ರಾವದಿಂದಿ ಮಗು ತೀವ್ರವಾಗಿ ಗಾಯಗೊಂಡಿರುವುದನ್ನು ಕಂಡು ಧಾವಿಸದ್ದಾರೆ. ಮಗುವಿನ ತಾಯಿ ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುತ್ತಾರೆ. ಆತಂಕಕಾರಿ ಸುದ್ದಿ ಕೇಳಿ ಸ್ಥಳಕ್ಕೆ ಧಾವಿಸಿದ ಮಗುವಿನ ತಾಯಿ ತನ್ನ ಮಗುವನ್ನು ಭರೂಚ್​ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಮಗು ತೀವ್ರ ಗಾಯಗಳಿಂದ ಬಳಲುತ್ತಿದ್ದು ಸ್ಥಿತಿ ಹದಗೆಟ್ಟಿತ್ತು ಎಂದು ವರದಿಯಾಗಿದೆ.

ಕೃತ್ಯ ಎಸಗಿರುವ ಆರೋಪಿ ಮಗುವನಿ ಕುಟುಂಬದವರಿಗೆ ಪರಿಚಿತನಾಗಿದ್ದು, ಅನೇಕ ಬಾರಿ ಆ 10 ತಿಂಗಳ ಮಗುವನ್ನು ಆಟವಾಡಿಸಲು ಅವರ ಮನೆಗೆ ಹೋಗಿದ್ದಾನೆ. ಭಾನುವಾರ (ಸೆಪ್ಟೆಂಬರ್​ 22) ಮನೆಯ ಮುಂದಿನ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವನ್ನು ಮನೆಯಿಂದ ಸ್ವಲ್ಪ ದೂರ ಕರೆದುಜೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಘಟನೆ ನೋಡಿ ಆಕ್ರೋಶಗೊಂಡ ಸ್ಥಳೀಯರು ಘಟನಾ ಸ್ಥಳದಿಂದ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ದೀಪಕ್ ಕುಮಾರ್ ಲಾಲ್ಬಾಬು ಸಿಂಗ್ ಎಂದು ಗುರುತಿಸಲಾಗಿದ್ದು, ಮಗುವನ್ನು ತನ್ನ ಮನೆಗೆ ಕರೆದೊಯ್ಯುವಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಉಪಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಓಜಾ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೋಕ್ಸೊ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.(ಏಜೆನ್ಸೀಸ್​​)