ನ್ಯೂಸ್

5ನೇ ತರಗತಿಯ ಬಾಲಕಿ ಮೇಲೆ ನಾಲ್ವರಿಂದ ಲೈಂಗಿಕ ದೌರ್ಜನ್ಯ; ಆರೋಪಿ ಪಿಯೋನ್ ಅಂದರ್

ನವದೆಹಲಿ: ದೆಹಲಿಯ ಮುನ್ಸಿಪಲ್ ಕಾರ್ಪೋರೇಷನ್ ನಡೆಸುತ್ತಿರುವ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 54 ವರ್ಷದ ಪಿಯೋನ್ ಒಬ್ಬನನ್ನು ತನ್ನ ಸಹಚರರೊಂದಿಗೆ ಸೇರಿ 5ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಈ ಪಿಯೋನ್ ನನ್ನು ಉತ್ತರ ಪ್ರದೇಶದ ಜೌನ್ಪುರ ಮೂಲದ ಅಜಯ್ ಎಂದು ಗುರುತಿಸಲಾಗಿದೆ. ಆತ ಗಾಜಿಯಾಬಾದ್ ನಲ್ಲಿ ವಾಸಿಸುತ್ತಿದ್ದ. ಆತನ ಸಹಚರ ತಪ್ಪಿಸಿಕೊಂಡಿದ್ದು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.

ಅಜಯ್ ಕಳೆದ 10 ವರ್ಷಗಳಿಂದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಡೆಸುವ ಶಾಲೆಯಲ್ಲಿ ಪಿಯೋನ್ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ದೆಹಲಿಯ ಮುನ್ಸಿಪಾಲ್ಟಿ ಕಾರ್ಪೋರೇಷನ್ ಈ ಕ್ಷಣಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ಪೊಲೀಸರ ಪ್ರಕಾರ, ಈ ಘಟನೆ ಮಾರ್ಚ್ 14ರಂದು ನಡೆದಿದೆ. ಘಟನೆಯ ನಂತರ, ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಇದೇ ಹಿನ್ನೆಲೆಯಲ್ಲಿ ಅಂತಿಮ ಪರೀಕ್ಷೆಗಳನ್ನು ಸಹ ತಪ್ಪಿಸಿಕೊಂಡಿದ್ದಳು.

ಶಿಕ್ಷಕಿ ವಿದ್ಯಾರ್ಥಿನಿಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗಳಿಗೆ ಗೈರುಹಾಜರಾದ ಬಗ್ಗೆ ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಆಕೆಯ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ ಎಂದು ಅವರು ಹೇಳಿದರು.

"ದೂರಿನ ಪ್ರಕಾರ, ಆರೋಪಿಯು ಅವಳನ್ನು ಶಾಲೆಯಿಂದ ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಅಪರಿಚಿತ ವಸ್ತುವಿನಿಂದ ಅವಳನ್ನು ನಿದ್ರಾಹೀನಗೊಳಿಸಿ ತನ್ನ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ" ಎಂದು ಅವರು ಹೇಳಿದರು.

ಘಾಜಿಪುರ ಶಾಲೆಯ ಪ್ರಾಂಶುಪಾಲರು ಮತ್ತು ಅವರ ಸಹ ಶಿಕ್ಷಕರು ಬುಧವಾರ ಈ ಘಟನೆಯನ್ನು ವರದಿ ಮಾಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ) ಅಮೃತಾ ಗುಗುಲೋತ್ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು ಮತ್ತು ಆಕೆಗೆ ಕೌನ್ಸೆಲಿಂಗ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 (ಅಪಹರಣ), 328 (ಅಪರಾಧ ಮಾಡುವ ಉದ್ದೇಶದಿಂದ ನೋವುಂಟು ಮಾಡುವುದು), 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಗಾಜಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)