ನ್ಯೂಸ್

VIDEO | ಮಂಡ್ಯ ಧ್ವಜ ವಿವಾದ: ಬೆಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಬಂಧನ!

ಮೋಹನ್​ ಶೆಟ್ಟಿ

ಬೆಂಗಳೂರು: ಮಂಡ್ಯದ ಧ್ವಜ ವಿಚಾರ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತಂತೆ ಬಿಜೆಪಿ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಈ ಬೆನ್ನಲ್ಲೇ ರಾಜಧಾನಿಯಲ್ಲಿ ಹೈಡ್ರಾಮಾ ಭುಗಿಲೆದ್ದಿದೆ.

ನಿನ್ನೆ ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯವರು ಹಾರಿಸಲಾಗಿದ್ದ ಹನುಮ ಧ್ವಜವನ್ನು ಕೆಳಗಿಸಿದರು. ಮಂಡ್ಯದ ಕೆರಗೋಡು ಗ್ರಾಮದಲ್ಲಿ ಈ ವಿಚಾರವಾಗಿ ಭಾರೀ ಖಂಡನೆ ವ್ಯಕ್ತವಾಯಿತು. ಇದನ್ನು ಖಂಡಿಸಿದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇಂದು ರಾಜಧಾನಿಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯದ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಹಾಕಲಾಗಿದ್ದ 108 ಅಡಿ ಎತ್ತರದ ಹನುಮ ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ನಡೆ ಸದ್ಯ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಇದೀಗ ಮಂಡ್ಯದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಮಾಡಿದ್ದಾರೆ. ಜಿಲ್ಲೆಯಲ್ಲಿ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡ ಹಿನ್ನೆಲೆ ಕೆರಗೋಡಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಮಧ್ಯೆ ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.