ಶಿವಮೊಗ್ಗ: ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ, ಶಿವಮೊಗ್ಗದ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ಗಳಲ್ಲಿ ಪರಿಶೀಲನೆ ಮುಂದುವರಿದಿದ್ದು, ದೊಡ್ಡಪೇಟೆ ಪೊಲೀಸರು 4.50 ಕೋಟಿ ರೂ. ಮೌಲ್ಯದ ಸೀರೆಯನ್ನು ವಶಕ್ಕೆ ಪಡೆದಿದ್ದಾರೆ. ಸೂಕ್ತ ದಾಖಲೆಯಿಲ್ಲದೇ, ಅನಧಿಕೃತವಾಗಿ ಸಂಗ್ರಹಿಸಿದ್ದ ಹಿನ್ನಲೆ ವಶಪಡಿಸಿಕೊಂಡಿದ್ದಾರೆ.
ತುಂಗಾನಗರ ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್ನಲ್ಲಿ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 1.40 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಚೆಕ್ಪೋಸ್ಟ್ನಲ್ಲಿ 20 ಲಕ್ಷ ರೂ. ಹಣ ವಶಪಡಿಸಿಕೊಳ್ಳಲಾಗಿದೆ. ವಿನೋಬನಗರ ಠಾಣಾ ವ್ಯಾಪ್ತಿಯ ಚೆಕ್ಪೋಸ್ಟ್ನಲ್ಲಿ 26 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಶಿಕಾರಿಪುರದ ದೇವಬಾಳ-ಯಡವಾಲ ರಸ್ತೆಯ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳು ಕಾರಿನಲ್ಲಿ ಸಾಗಿಸುತ್ತಿದ್ದ 70 ಲೀ. ಮದ್ಯ, 56 ಲೀ. ಬಿಯರ್ ವಶಕ್ಕೆ ಪಡೆದುಕೊಂಡಿದ್ದಾರೆ.