ಹುಣಸೂರು: ಪಟ್ಟಣದ ನಗರಸಭೆ ಕಚೇರಿ ಕಟ್ಟಡದಲ್ಲಿ ಇರಿಸಿದ್ದ ಮತಯಂತ್ರಗಳನ್ನು ಜಿಲ್ಲಾಡಳಿತದ ವಶಕ್ಕೆ ಒಪ್ಪಿಸಲಾಯಿತು.
ಕಳೆದ ಡಿಸೆಂಬರ್‌ನಲ್ಲಿ ನಡೆದಿದ್ದ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಳಸಿದ್ದ ಮತಗಳನ್ನು ಪೊಲೀಸ್ ಭದ್ರತೆಯಲ್ಲಿ ಇಡಲಾಗಿತ್ತು. ಕೊಠಡಿಯ ಸುತ್ತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ಚುನಾವಣೆ ನಡೆದ 6 ತಿಂಗಳ ಅವಧಿಯಲ್ಲಿ ಉಚ್ಚ ನ್ಯಾಯಾಲಯದಲ್ಲಿ ಯಾವುದೇ ದೂರು ದಾಖಲಾಗಿಲ್ಲದ ಕಾರಣ ತಾಲೂಕು ಆಡಳಿತದ ವಶದಲ್ಲಿದ್ದ ಇವಿಎಂಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ಜಿಲ್ಲಾಡಳಿತ ಕಳುಹಿಸಿದ್ದ ಲಾರಿಗಳಲ್ಲಿ ಎಲ್ಲ ಯಂತ್ರಗಳನ್ನು ಲೋಡ್ ಮಾಡಿ ಪೊಲೀಸ್ ಭದ್ರತೆಯೊಂದಿಗೆ ಕಳುಹಿಸಿಕೊಡಲಾಯಿತು ಎಂದು ತಹಸೀಲ್ದಾರ್ ಐ.ಇ.ಬಸವರಾಜ ಪತ್ರಿಕೆಗೆ ಮಾಹಿತಿ ನೀಡಿದರು.