ಸಿದ್ದಾಪುರ: ಮಾಲ್ದಾರೆ ಜನಪರ ಕ್ರೀಡಾ ಮತ್ತು ಕಲಾ ಯುವಜನ ಸಂಘ(ರಿ)ಇವರ ಆಶ್ರಯದಲ್ಲಿ ಮೇ.19, 20ರಂದು ಜನಪರ ಪ್ರೀಮಿಯರ್ ಲೀಗ್-3 ಕ್ರಿಕೆಟ್ ಪಂದ್ಯ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಭಾವ ಮಾಲ್ದಾರೆ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಯಿಂದ ನಿರಂತರವಾಗಿ ಸಾಮಾಜಿಕ ಚಟುವಟಿಕೆ ಹಾಗೂ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದು, ಈ ವರ್ಷ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಮೂರನೇ ವರ್ಷದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಪಂದ್ಯಾವಳಿಯ ಉದ್ಘಾಟನೆಯನ್ನು ಶಾಸಕ ಎ.ಎಸ್. ಪೊನ್ನಣ್ಣ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಪಟ್ಟಡ ರಂಜಿ ಪೂಣಚ್ಚ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಾತಿ, ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಹಾಗೂ ಕೊನೆಯ ದಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸೋಮವಾರ ಉದ್ಘಾಟನೆ ಪಂದ್ಯ ವಿರಾಜಪೇಟೆ ತಾಲೂಕು ಪತ್ರಕರ್ತ ಸಂಘ ಹಾಗೂ ಸಿದ್ದಾಪುರ ಪೊಲೀಸರ ನಡುವೆ ನಡೆಯಲಿದೆ. ಲೀಗ್‌ನಲ್ಲಿ ಟ್ರೋಫಿಗಾಗಿ ಹತ್ತು ತಂಡಗಳ ನಡುವೆ ಹಣಾಹಣಿ ನಡೆಯಲಿದೆ ಎಂದು ವಿವರಿಸಿದರು.
ಮಾಲ್ದಾರೆ, ಚೆನ್ನಯ್ಯನ ಕೋಟೆ, ಪಾಲಿಬೆಟ್ಟ, ಗ್ರಾಮದ 100ಕ್ಕೂ ಹೆಚ್ಚು ಕ್ರಿಕೆಟಿಗರು ಈ ಪಂದ್ಯದಲ್ಲಿ ಭಾಗವಹಿಸಲಿದ್ದಾರೆ ಎಂದರು. ಕಾರ್ಯದರ್ಶಿ ವಿನಿಲ್, ಉಪಾಧ್ಯಕ್ಷ ಅಂತೋಣಿ ಇದ್ದರು.