ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ:ವಿದ್ಯುತ್ ಪೂರೈಸಲು ಜೆಸ್ಕಾಂ ಮೀನಮೇಷ ! – ತೋಟದ ಮನೆಗಳಿಗೆ ಕರೆಂಟ್ ನೀಡಲು ಸರ್ಕಾರದ ಆದೇಶ, ಪಾಲನೆ ಮಾಡದ ಅಧಿಕಾರಿಗಳು
ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ:ಭಾರತ ತಂಡಕ್ಕೆ ರೋಹಿತ್ ಶರ್ಮ ಅಗತ್ಯವಿಲ್ಲ! ಶಮಾ ಹೇಳಿಕೆಗೆ ಸಾಥ್ ಕೊಟ್ಟ ತೃಣಮೂಲ ಕಾಂಗ್ರೆಸ್ ಸಂಸದ | Rohit Sharma
ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಉತ್ತರಿಸಿದ ಡಿಕೆಶಿ, “ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವಿಲ್ಲ” ಎಂದರು.