ನ್ಯೂಸ್

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇಂದು

ಎಂ.ರವಿ

ಹನೂರು: ಸೆಸ್ಕ್ ಉಪ ವಿಭಾಗದ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಫೀಡರ್‌ನಲ್ಲಿ ಮೇ 10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯವಾಗಲಿದೆ.

ಹನೂರಿನ ಮುಖ್ಯರಸ್ತೆಯ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಆಗಬೇಕಿದೆ. ಆದ್ದರಿಂದ ಸೆಸ್ಕ್ ಹನೂರು ಉಪ ವಿಭಾಗದ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿನ ಹನೂರು ಟೌನ್ ಹಾಗೂ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಎಇಇ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.