ನ್ಯೂಸ್

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇಂದು

ಎಂ.ರವಿ

ಗೋಣಿಕೊಪ್ಪಲು: ಶ್ರೀಮಂಗಲ 66/11 ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲ ಫೀಡರ್‌ಗಳಲ್ಲಿ ಮೇ 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರದ ನಿರ್ವಾಹಣೆ ಹಾಗೂ ಇತರ ಅಭಿವೃದ್ಧಿ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಆದ್ದರಿಂದ ಕಾಯಿಮನೆ, ಮಂಚಳ್ಳಿ, ಪೂಜೆಕಲ್ಲು, ನಲ್ಲೂರು, ನಾತಂಗಾಲ, ತೈಲ, ಕುಟ್ಟ, ಸಿಂಕೋನ, ಕೆ.ಎಂ.ಕೊಡ್ಲಿ, ಶ್ರೀಮಂಗಲ, ಹರಿಹರ, ನಾಲ್ಕೇರಿ, ಚೀಪೆಕೊಲ್ಲಿ, ಗುಡ್ಡಮಾಡು, ಬಿರುಗ, ಕೆ.ಬಾಡಗ, ಶೆಟ್ಟಿಗೇರಿ, ಕುರ್ಚಿ, ಬಿರುನಾಣಿ, ವೆಸ್ಟ್ ನೆಮ್ಮಲೆ, ತೆರಾಲು, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.