ಮುಂಬೈ: ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಜೂನ್ 27ರಂದು ಬಿಡುಗಡೆಯಾಯಿತು. ಪ್ರಭಾಸ್, ಅಮಿತಾಭ್ಬಚ್ಚನ್, ಕಮಲ್ಹಾಸನ್, ದೀಪಿಕಾ ಪಡುಕೋಣೆ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ದಿಶಾ ಪಟಾನಿ, ಸಾಸ್ವತ್ ಚಟರ್ಜಿ ಮತ್ತು ಶೋಭನಾ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆದ ಬಳಿಕ ಸೃಷ್ಟಿಸಿದ ದಾಖಲೆ ಬಗ್ಗೆ ಹೇಳಬೇಕಿಲ್ಲ ಎಲ್ಲರಿಗೂ ಗೊತ್ತೆ ಇದೆ.
ಈ ಸಿನಿಮಾವನ್ನು ಇಷ್ಟಪಡುವವರ ಪಟ್ಟಿ ಹೇಗಿದೆಯೋ ಅದೆ ಮಾದರಿಯಲ್ಲಿ ಕಲ್ಕಿ 2898 ಎಡಿ ಚಿತ್ರವನ್ನು ಇಷ್ಟಪಡದವರ ಪಟ್ಟಿಯೂ ಇದೆ. ಆ ಪಟ್ಟಿಯಲ್ಲಿ ಗೋಲ್ಮಾಲ್ ಸಿನಿಮಾದ ನಟ ಅರ್ಷದ್ ವಾರ್ಸಿ ಕೂಡ ಇದ್ದಾರೆ. ಇತ್ತೀಚಿಗಿನ ಸಂದರ್ಶನವೊಂದರಲ್ಲಿ ಅವರಿಗೆ ನೀವು ಕೊನೆಯದಾಗಿ ನೋಡಿದ ಸಿನಿಮಾ ಯಾವುದು ಎಂದು ಕೇಳಲಾಗಿದೆ. ಅದಕ್ಕೆ ಉತ್ತರಿಸಿದ ಅವರು ಸೌತ್ ಸಿನಿಮಾ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
ನನಗೆ ಇಷ್ಟವಾಗದ ಕಲ್ಕಿ ಸಿನಿಮಾವನ್ನು ನಾನು ನೋಡಿದೆ. ಸಿನಿಮಾದಲ್ಲಿ ಅಮಿತ್ ಜೀ ಅವರ ನಟನೆ ಅದ್ಭುತವಾಗಿದೆ. ಅವರಲ್ಲಿರುವ ಶಕ್ತಿಯಲ್ಲಿ ಸ್ವಲ್ಪವಾದರೂ ನಮಗೆ ಸಿಕ್ಕಿದರೆ ಜೀವನವು ಉತ್ತಮವಾಗಿರುತ್ತದೆ. ಆದರೆ ಪ್ರಭಾಸ್ ನಟನೆಯನ್ನು ನೋಡಿ ನನಗೆ ನಿಜವಾಗಿಯೂ ಬೇಜರಾಗಿದೆ. ಪ್ರಭಾಸ್ ಜೋಕರ್ನಂತೆ ಕಾಣುತ್ತಿದ್ದಾರೆ. ನಾನು ಮ್ಯಾಡ್ಮ್ಯಾಕ್ಸ್, ಗಿಬ್ಸನ್ ಅವರಂತೆ ನೋಡಲು ಇಷ್ಟಪಡುತ್ತೇನೆ. ಅವರು ಏಕೆ ಹೀಗೆ ನಟಿಸಿದ್ದಾರೆ ಎಂದು ನನಗೆ ಅರ್ಥವಾಗುತಿಲ್ಲ ಎಂದು ಹೇಳಿದ್ದಾರೆ.
ಅರ್ಷದ್ ವಾರ್ಸಿ ಈ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮತ್ತು ಅಭಿಮಾನಿಗಳು ಪ್ರಭಾಸ್ ಅವರ ಬಳಿ ಅರ್ಷದ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. (ಏಜೆನ್ಸೀಸ್)