Vector illustration in HD very easy to make edits. 
ನ್ಯೂಸ್

ಪ್ರಬುದ್ಧ ಕೊಲೆ ಪ್ರಕರಣ ಸಿಐಡಿಗೆ

ಗೋವಿಂದರಾಜು ಚಿನ್ನಕುರ್ಚಿ

ಬೆಂಗಳೂರು: ಸುಬ್ರಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧ ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿಗೆ ವಹಿಸಿದ್ದಾರೆ.

ಬೃಂದಾವನ ಲೇಔಟ್ ನಿವಾಸಿ ಸಾಮಾಜಿಕ ಕಾರ್ಯಕರ್ತೆ ಕೆ.ಆರ್. ಸೌಮ್ಯ ಪುತ್ರಿ ಪ್ರಬುದ್ಧ, ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ಬಿಬಿಎಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೇ 15ರ ಸಂಜೆ ವಿದ್ಯಾರ್ಥಿನಿ ಮನೆಯ ಶೌಚಗೃಹದಲ್ಲಿ ಹತ್ಯೆಗೆ ಒಳಗಾಗಿದ್ದಳು. ಆರಂಭದಲ್ಲಿ ಆತ್ಮಹತ್ಯೆ ಎಂದು ದೂರು ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ನಡೆಸಿದಾಗ ಅಪ್ರಾಪ್ತನೊಬ್ಬ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿತ್ತು.

ಪೊಲೀಸರ ತನಿಖಾ ಪ್ರಕ್ರಿಯೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಾಮಾಜಿಕ ಕಾರ್ಯಕರ್ತರ ನಿಯೋಗದೊಂದಿಗೆ ಮೃತಳ ತಾಯಿ ಸೌಮ್ಯ ಸೋಮವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಿಐಡಿ ತನಿಖೆಗೆ ವಹಿಸಬೇಕೆಂದು ಮನವಿ ಸಲ್ಲಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ, ಮನವಿ ಪುರಸ್ಕರಿಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್‌ಗೆ ಸೂಚಿಸಿದರು.