ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಕೋರ್ಟ್ ಸ್ಥಾಪಿಸುವಂತೆ ಡಾ.ರೂಪಾ ಹಾಸನ ಇವರ ನೇತೃತ್ವದ ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿತು.
ಸಂತ್ರಸ್ಥರಿಗೆ ತ್ವರಿತ ನ್ಯಾಯ ದೊರಕಿಸಿಕೊಡಬೇಕು. ಐಎಸ್‌ಐಟಿ ತನಿಖೆ ಆದಷ್ಟು ಶೀಘ್ರ ಪೂರ್ಣಗೊಳಿಸಿ ವರದಿ ತರಿಸಿಕೊಂಡು ಕ್ರಮ ಜರುಗಿಸಬೇಕು. ಮತ್ತೆಲ್ಲೂ ಇಂತಹ ಘಟನೆ ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮುಖ್ಯಮಂತ್ರಿಗಳನ್ನು ಆಗ್ರಹಿಸಿತು.
ನಿಯೋಗದ ಮನವಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದರು.
ಡಾ.ರೂಪಾ ಹಾಸನ, ಧರ್ಮೇಶ್, ಆರ್.ಪಿ.ವೆಂಕಟೇಶಮೂರ್ತಿ, ಮಮತಾ ಶಿವು, ವಿಜಯಕುಮಾರ್, ಕೆ.ಎಸ್.ವಿಮಲಾ ಮತ್ತಿತರರು ನಿಯೋಗದಲ್ಲಿದ್ದರು.