ನ್ಯೂಸ್

ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಟ್ವಿಸ್ಟ್: ಅಶ್ಲೀಲ ವಿಡಿಯೋಗಳು ಅಸಲಿ ಎಫ್‌ಎಸ್‌ಎಲ್‌ ವರದಿ ಬಹಿರಂಗ

ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋಗಳೆಲ್ಲಾ ಅಸಲಿಯಾಗಿದ್ದು, ಯಾವ ವಿಡಿಯೋಗಳನ್ನು ತಿರುಚಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ () ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಅತ್ಯಾಚಾರ ಪ್ರಕರಣದ ದಾಖಲಾದ ಮೇಲೆ ಅಶ್ಲೀಲ ವಿಡಿಯೋಗಳನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿದ್ದರು. ಎಲ್ಲಾ ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸದ್ಯ ಪ್ರಯೋಗಾಲದಿಂದ ಈ ವಿಡಿಯೋಗಳ ಬಗ್ಗೆ ವರದಿ ನೀಡಿದ್ದು, ವಿಡಿಯೋಗಳು ನೈಜವಾಗಿವೆ. ಯಾವುದೇ ರೀತಿಯ ತಿರುಚುವಿಕೆ ನಡೆದಿಲ್ಲ ಎಂದು ಉಲ್ಲೇಖ ವರದಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ವಿಡಿಯೋಗಳು ಅಸಲಿ ಎಂದು ಪತ್ತೆಯಾಗಿದೆ. ಇನ್ನು ವಿಡಿಯೋದಲ್ಲಿರುವವರು ಹಾಗೂ ಬಂಧಿತರ ಹೋಲಿಕೆಯಾಗಬೇಕಿದೆ. ಈ ಬಗ್ಗೆ ತನಿಖಾಧಿಕಾರಿಗಳು ಅಗತ್ಯ ಪರಿಶೀಲನೆಯನ್ನು ಮಾಡಲಿದ್ದಾರೆ. ವಿಡಿಯೋದಲ್ಲಿರುವ ಮಹಿಳೆರನ್ನು ವಿಚಾರಣೆಗೆ ಒಳಪಡಿಸಿ ಸಾಕ್ಷಿ ಸಂಗ್ರಹ ಮಾಡುವ ಸಾಧ್ಯತೆ ಇದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋಗಳಲ್ಲಿ ಪುರುಷನ ಮುಖ ಪ್ರದರ್ಶಿಸಿಲ್ಲ. ಹೀಗಾಗಿ ವಿಡಿಯೋದಲ್ಲಿರುವ ವ್ಯಕ್ತಿಗೂ ಬಂಧಿತ ಆರೋಪಿಗೂ ಹೋಲಿಕೆ ಮಾಡಿ ತನಿಖೆ ನಡೆಸಲಾಗುತ್ತಿದೆ, ಈ ತನಿಖೆಯ ಮಹತ್ವದ್ದು ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದರು.

ಚಾರ್ಜ್‌ಶೀಟ್‌ ಸಲ್ಲಿಕೆಗೆ ತಯಾರಿ: ಹಾಸನ ಪೆನ್‌ಡ್ರೈವ್‌ ಹಗರಣ ಹೊರಬಂದು ಮೂರು ತಿಂಗಳಾಗಿದೆ. ಪ್ರಜ್ವಲ್‌ ರೇವಣ್ಣ ಬಂಧಿಸಿ ಎರಡು ತಿಂಗಳು ಸಮೀಪಿಸುತ್ತಿದೆ. ಈಗಾಗಲೇ ಮತ್ತೊಬ್ಬ ಆರೋಪಿ ಎಚ್‌ಡಿ ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಹೀಗಾಗಿ, ತನಿಖೆಯನ್ನು ಚುರುಕುಗೊಳಿಸಿರುವ ಎಸ್‌ಐಟಿ ತಂಡ ಆರೋಪ ಪಟ್ಟಿ (ಚಾರ್ಜ್‌ ಶೀಟ್‌) ಸಲ್ಲಿಸಲು ಅಗತ್ಯ ತಯಾರಿ ನಡೆಸುತ್ತಿದ್ದಾರೆ.