ಬೆಂಗಳೂರು: ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಬೆಳಕು ಬಿತ್ತಿದವರು ಮತ್ತು ಪ್ರಾಕೃತ ಕಥಾ ಸಾಹಿತ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾಡೋಜ ಡಾ. ಹಂಪ ನಾಗರಾಜಯ್ಯ ಮತ್ತು ಸಾಹಿತಿ ಕಮಲಾ ಹಂಪನಾ, ಹಲವು ವಿಚಾರಗಳ ಕುರಿತು ವೇದಿಕೆಯಲ್ಲಿ ಮಾತನಾಡಿದರು.
ವೇದಿಕೆಯಲ್ಲಿ ಮಾತನಾಡಿದ ನಾಡೋಜ ಡಾ. ಹಂಪ ನಾಗರಾಜಯ್ಯ, "ಪ್ರಾಕೃತ ಭಾಷೆ ಸಂಸ್ಕೃತಕ್ಕಿಂತ ಹಳೇ ಭಾಷೆ. ಶಾಸ್ತ್ರೀಯ ಭಾಷಾ ಸ್ಥಾನಮಾನದಲ್ಲಿ ಸಂಸ್ಕೃತವನ್ನು ತಂದು ಪ್ರಾಕೃತವನ್ನು ನಿರ್ಲಕ್ಷಿಸಲಾಗಿದೆ. ಇದರಲ್ಲಿ ದೊಡ್ಡ ರಾಜಕೀಯವಿದೆ, ಆ ಬಗ್ಗೆ ನಾನು ಹೆಚ್ಚು ಮಾತನಾಡಲು ಬಯಸುವುದಿಲ್ಲ" ಎಂದು ಹೇಳಿದರು.
"ಸಿದ್ದರಾಮಯ್ಯ ಅವರು ದೇಶದಲ್ಲೆ ಮೊದಲ ಪ್ರಾಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮೊದಲ ಬಾರಿಗೆ ಸಿಎಂ ಆದಾಗ 25 ಕೋಟಿ ರೂ. ನೀಡಿದ್ದರು. ತದನಂತರ ಬಂದ ಸರ್ಕಾರಗಳು ಈ ಬಗ್ಗೆ ಗಮನ ಹರಿಸಲಿಲ್ಲ. ಸಿದ್ದರಾಮಯ್ಯ ಈಗ ಮತ್ತೆ ಮುಖ್ಯಮಂತ್ರಿಗಳಾಗಿದ್ದಾರೆ. ಮೊದಲ ಪ್ರಾಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಅವರು ಸಹಕಾರ ನೀಡಬೇಕು" ಎಂದು ಸಿಎಂಗೆ ಮನವಿ ಮಾಡಿದರು.
ಇದನ್ನೂ ಓದಿ: ಸಂಪ್ರತಿಷ್ಠಾನದ ತ್ರಿಂಶೀಯ ವಾರ್ಷಿಕೋತ್ಸವ, ನೂತನ ಗ್ರಂಥ ಅನಾವರಣ – ಪ್ರಶಸ್ತಿ ಪ್ರದಾನ ಹಾಗೂ ಸಂಸ್ಕೃತ ಪ್ರತಿಭಾ ಪುರಸ್ಕಾರ
ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ನಾಡೋಜ ಡಾ. ಹಂಪ ನಾಗರಾಜಯ್ಯ, ಕಮಲಾ ಹಂಪನಾ, ಸಾಹಿತಿ ಬರಗೂರು ರಾಮಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.