ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗಾಗಿ ಎನ್​ಐಎ ತೀವ್ರ ಹುಡುಕಾಟ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತೀವ್ರ ಹುಡುಕಾಟ ಆರಂಭಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಕರಾವಳಿ ಪ್ರದೇಶದಲ್ಲಿ ತೀವ್ರ ಶೋಧ ನಡೆಸಿದೆ.

ಆರೋಪಿಗಳಾದ ಮುಸ್ತಾಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ತುಫೇಲ್, ಮಸೂದ್ ಅಗ್ನಾಡಿ ಸೇರಿದಂತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಎನ್​ಐಎ ದಕ್ಷಿಣಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಶೋಧ ನಡೆಸಿದೆ.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ, ಸುಳ್ಯ ಮಾತ್ರವಲ್ಲದೆ ಕೊಡಗು ಜಿಲ್ಲೆಯಲ್ಲೂ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ. ಅಲ್ಲದೆ, ತಲೆಮರೆಸಿಕೊಂಡಿರುವ ಆರೋಪಿಗಳ ಭಾವಚಿತ್ರವಿರುವ ವಾಂಟೆಡ್​ ನೋಟಿಸ್​ನ ಭಿತ್ತಿಪತ್ರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗಿದೆ. ಎನ್​ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆಯ ಮೇಲೂ ವಾಂಟೆಡ್ ಪೋಸ್ಟರ್ ಅಂಟಿಸಿದ್ದಾರೆ.