ಬೆಂಗಳೂರು: ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣ ಪತ್ರ ವನ್ನು ಆನ್ಲೈನ್ ಮೂಲಕವೇ ವಿತರಿಸಲು ಕಂದಾಯ ಇಲಾಖೆ ಅಂತಿಮ ಸಿದ್ಧತೆ ನಡೆಸಲಾಗುತ್ತಿದೆ.
ಈ ಸಂಬಂಧ ಗುರುವಾರ ಕಂದಾಯ ಇಲಾಖೆಯಲ್ಲಿ ಮಹತ್ವದ ಸಭೆ ನಡೆಯಿತು. ಆನ್‌ಲೈನ್ ಮೂಲಕ ಪ್ರಮಾಣ ಪತ್ರ ವಿತರಣೆಗಿರುವ ಸವಾಲು, ಜನರಿಗಾಗುವ ಅನುಕೂಲ ಮತ್ತು ಅನುಷ್ಠಾನದ ಪೂರ್ವ ತಯಾರಿ ಬಗ್ಗೆ ಕಂದಾಯ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಇ-ಆಡಳಿತಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಪ್ರಗತಿಯ ಹಾದಿಯಲ್ಲಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಈ ಸಂಬಂಧ ಇಂದು ಅಧಿಕಾರಿಗಳ ಸಭೆ ನಡೆಸಿದ್ದು ತಾಂತ್ರಿಕ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲಾಯಿತು ಎಂದು ಹೇಳಿದ್ದಾರೆ.