ನ್ಯೂಸ್

ಸುಪ್ರೀಂ ಕೋರ್ಟ್​ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿದ ರಾಷ್ಟ್ರಪತಿ

ನವದೆಹಲಿ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಹಂಚಿಕೆಯಾಗಿದ್ದ ಕೊಲಿಜಿಯಂ ಪ್ರಸ್ತಾವನೆಯನ್ನು ಕೇಂದ್ರ ತೆರವುಗೊಳಿಸಿದ ನಂತರ ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಮೂರ್ತಿಗಳನ್ನು ನೇಮಕ ಮಾಡಿದ್ದಾರೆ.

ನೇಮಕಗೊಂಡ ಐವರು ನ್ಯಾಯಾಧೀಶರ ಹೆಸರು:
  • ನ್ಯಾಯಮೂರ್ತಿ ಪಂಕಜ್ ಮಿಥಾಲ್, ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ
  • ನ್ಯಾಯಮೂರ್ತಿ ಸಂಜಯ್ ಕರೋಲ್, ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ
  • ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್, ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ
  • ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ, ನ್ಯಾಯಾಧೀಶರು, ಪಾಟ್ನಾ ಹೈಕೋರ್ಟ್
  • ನ್ಯಾಯಮೂರ್ತಿ ಮನೋಜ್ ಮಿಶ್ರಾ, ನ್ಯಾಯಾಧೀಶರು, ಅಲಹಾಬಾದ್ ಹೈಕೋರ್ಟ್

ಕೊಲಿಜಿಯಂ ಶಿಫಾರಸ್ಸು ಮಾಡಿರುವ ಐವರು ಹೊಸ ನ್ಯಾಯಾಧೀಶರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ(ಫೆ.4) ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಭಾರತದ ಸಂವಿಧಾನದ ಅಡಿಯಲ್ಲಿರುವ ನಿಬಂಧನೆಗಳ ಪ್ರಕಾರ, ರಾಷ್ಟ್ರಪತಿಗಳು ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ. ಅವರೆಲ್ಲರಿಗೂ ಶುಭ ಹಾರೈಸುತ್ತೇನೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. (ಏಜೆನ್ಸೀಸ್)