ನ್ಯೂಸ್

ಹೊಸ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ ; ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ನೇಮಕ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ನ್ಯಾಯಾಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಇದೇ. 24ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಇದೀಗ ರಾಷ್ಟ್ರಪತಿ ಅಂಕಿತ ಬಿದ್ದಿದ್ದು, ದಿನೇಶ್ ಕುಮಾರ್ ನಿವೃತ್ತಿ ನಂತರ ಅಂಜಾರಿಯಾ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅಂಜಾರಿಯಾ ಅವರು 2011ರಿಂದ ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿಯಾಗಿದ್ದರು. ಹೈಕೋರ್ಟ್ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳ ವಕೀಲಿಕೆ ಮಾಡಿದ್ದಾರೆ. ಅಲ್ಲದೇ ಸಿವಿಲ್ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.