ನವದೆಹಲಿ: ಚಂದ್ರಯಾನ-3 ಹಾಗೂ ಸೌರಯಾನಗಳ ಕ್ರೆಡಿಟ್ ವಿಚಾರವಾಗಿ ಆಡಳಿತ ಹಾಗೂ ವಿರೋಧಪಕ್ಷಗಳ ನಡುವೆ ಭಾರಿ ವಾಗ್ವಾದ ನಡೆಯುತ್ತಿರುವುದು ಮುಂದುವರಿದಿದೆ. ಈ ಮಧ್ಯೆ ಚಂದ್ರಯಾನ-3ರ ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳ ಸಲ್ಲಿಕೆ ಆಗಿದೆ.
ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆದರದಿಂದ ಸ್ವಾಗತಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಚಂದ್ರಯಾನ-3ರ ಯಶಸ್ಸಿನ ಹಿನ್ನೆಲೆಯಲ್ಲಿ ಹೂಗುಚ್ಛ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನತ್ತ ಕೂಡ ಯಾನ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಇಂದು ಆದಿತ್ಯ ಎಲ್-1 ಉಡಾವಣೆ ಮಾಡಲಾಗಿದೆ. ಆದರೆ ಚಂದ್ರಯಾನದಂತೆ ಈ ವಿಚಾರದಲ್ಲೂ ಕಾಂಗ್ರೆಸ್ ಬಿಜೆಪಿ ನಡುವೆ ಕ್ರೆಡಿಟ್ ವಾರ್ ನಡೆಯಲಾರಂಭಿಸಿದೆ.