ನವದೆಹಲಿ: ಇಂದು ಕಾರ್ಗಿಲ್ ವಿಜಯ ದಿವಸ್. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ದೇಶಾದ್ಯಂತ ಗೌರವ ಸಲ್ಲಿಸಲಾಗಿದೆ. ರಾಜಕೀಯ ಪ್ರಮುಖರೂ ಸಹ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ.
ಅಂತೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ, ದೆಹಲಿಯಲ್ಲಿರುವ ಸೇನಾ ಆಸ್ಪತ್ರೆಗೆ 20 ಲಕ್ಷ ರೂ.ದೇಣಿಗೆ ನೀಡುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಇಂದು ಚೆಕ್ನ್ನು ಹಸ್ತಾಂತರ ಮಾಡಿದ್ದಾರೆ.
ರಾಷ್ಟ್ರಪತಿಯವರು ನೀಡಿದ ಹಣವನ್ನು ಸೇನಾ ಆಸ್ಪತ್ರೆಯಲ್ಲಿ ಕೊವಿಡ್-19 ಚಿಕಿತ್ಸೆಗಾಗಿ ಬಳಸುವ ಉಪಕರಣ ಮತ್ತು ಔಷಧಿಗೆ ಬಳಕೆ ಮಾಡಲಾಗುತ್ತದೆ. ಈ ಹಣದಲ್ಲಿ ಪವರ್ಡ್ ಏರ್ ಪ್ಯೂರಿಫೈಯಿಂಗ್ ರೆಸ್ಪಿರೇಟರ್‌ಗಳನ್ನು ಖರೀದಿ ಮಾಡಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. (ಏಜೆನ್ಸೀಸ್)