ನ್ಯೂಸ್

ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ: ಆಕಾಶವಾಣಿಯಲ್ಲಿ ರಾತ್ರಿ 9:30 ಕ್ಕೆ ನೇರ ಪ್ರಸಾರ| Independence Day

Independence Day : ಸ್ವಾತಂತ್ರ್ಯ ದಿನದ ಮುನ್ನಾದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿಗಳ ಈ ಸಂದೇಶವು ಆಕಾಶವಾಣಿಯ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ ಮತ್ತು ದೂರದರ್ಶನದ ಎಲ್ಲಾ ಚಾನೆಲ್‌ಗಳಲ್ಲಿ ಹಿಂದಿಯಲ್ಲಿ ಪ್ರಸಾರವಾಗಲಿದೆ. ಇದರ ನಂತರ, ಅದರ ಇಂಗ್ಲಿಷ್ ಆವೃತ್ತಿಯನ್ನು ದೂರದರ್ಶನದಲ್ಲಿ ತೋರಿಸಲಾಗುತ್ತದೆ.

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಗುರುವಾರದಂದು ಸಂಜೆ 7 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇವರ ಸಂದೇಶವು ಆಕಾಶವಾಣಿಯಲ್ಲಿ ಪ್ರಸಾರವಾಗಲಿದೆ. ದೂರದರ್ಶನ ಹಾಗೂ ಚಾನಲ್​ಗಳಲ್ಲಿ ಹಿಂದಿ ಭಾಷೆಯಲ್ಲಿ ಪ್ರಸಾರವಾಗಿದೆ ಎಂಧು ತಿಳಿಸಿದ್ದಾರೆ.

ರಾಷ್ಟ್ರಪತಿ ಕಚೇರಿಯ ಪ್ರಕಾರ, ದೂರರ್ಶನದಲ್ಲಿ ಇಂಗ್ಲಿಷ್​ ಹಾಗೂ ಹಿಂದಿ ಭಾಷೆಯಲ್ಲಿ ಪ್ರಸಾರ ಮಾಡಲಾಗುತ್ತದೆ. ಪ್ರಾದೇಶಿಕ ವಾಹಿನಿಗಳು ಬೇರೆ ಬೇರೆ ಭಾಷೆಗಳಲ್ಲಿ ಭಾಷಣವನ್ನು ಪ್ರಸಾರ ಮಾಡಲಿದ್ದಾರೆ. ಇನ್ನು ಆಲ್​ ಇಂಡಿಯಾ ರೆಡಿಯೋ ತನ್ನ ಆವೃತ್ತಿಯಲ್ಲಿ ರಾತ್ರಿ 9:30 ಸರಿಯಾಗಿ ಪ್ರಸಾರ ಮಾಡಲಿದೆ.

ಪ್ರತಿ ವರ್ಷದ ಸಂಪ್ರದಾಯದಂತೆ, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್​ 15 ರಂದು ಶುಕ್ರವಾರ ಬೆಳಿಗ್ಗೆ ಕೆಂಪು ಕೋಟೆಯಿಂದ ಸ್ವಾತಂತ್ರ್ಯ ದಿನಾಚರಣೆ ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ ಸಂದರ್ಭದಲ್ಲಿ ದೇಶಾದ್ಯಂತ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಆಗಸ್ಟ್​ 15ರ ದಿನದಂದು ದೆಹಲಿ ಮೆಟ್ರೋ ರೈಲು ನಿಗಮವು ಕೆಂಪು ಕೋಟೆಗೆ ಆಗಮಿಸುವವರಿಗೆ ವಿಶೇಷ ವ್ಯವಸ್ಥೆ ಮಾಡಿದ್ದು, ಬೆಳಿಗ್ಗೆ 4 ಗಂಟೆಯಿಂದ ಬೆಳಿಗ್ಗೆ 6 ರವರೆಗೆ 30 ನಿಮಿಷಗಳಿಗೊಂದರಂತೆ ರೈಲುಗಳ ಲಭ್ಯ ಮಾಡಿದೆ. ಇದರ ನಂತರ, ಮೆಟ್ರೋ ತನ್ನ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಚಲಿಸುತ್ತದೆ. (ಏಜೆನ್ಸೀಸ್​)