ನ್ಯೂಸ್

ಕರ್ತವ್ಯಪಥದಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ತವ್ಯಪಥದಲ್ಲಿ 74ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಈಜಿಪ್ಟ್ ಅಧ್ಯಕ್ಷ ಅಬ್ದೆಲ್​​​​ ಫತ್ತಾಹ್​ ಅಲ್ ಸಿಸಿ ಇದ್ದರು.

ರಾಷ್ಟ್ರ ರಾಜಧಾನಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೇರವೇರಿಸಿದರು. ಈ ವೇಳೆ ಭಾರತೀಯ ಸೇನಾ ಪಡೆಯು ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಿತು.

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಹುತಾತ್ಮ ಯೋಧರ ನೆನಪಿಗಾಗಿ ಕಟ್ಟಿಸಿರುವ ಅಮರ್ ಜವಾಬ್ ಜ್ಯೋತಿಯಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, 3 ಸೇನಾ ಮುಖ್ಯಸ್ಥರು ಗೌರವ ನಮನ ಸಲ್ಲಿಸಿದರು.