ನ್ಯೂಸ್

ರಾಷ್ಟ್ರಪತಿ ರಾಮನಾಥ ಕೋವಿಂದ್ ಆರೋಗ್ಯದಲ್ಲಿ ವ್ಯತ್ಯಯ: ದೆಹಲಿ ಏಮ್ಸ್​ ಆಸ್ಪತ್ರೆಗೆ ದಾಖಲು

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಅವರು ಹೃದಯದ ಬೈಪಾಸ್ ಸರ್ಜರಿಗೆ ಒಳಗಾಗಲಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಕಳೆದ ಮಂಗಳವಾರ ಅವರು ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಆ ವೇಳೆ ಅವರ ಹೃದಯದ ಕಾರ್ಯವಿಧಾನದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಸೇನಾ ಆಸ್ಪತ್ರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಸೂಚಿಸಿದ್ದರು. ಹೀಗಾಗಿ ಅವರು ಇಂದು ಮಧ್ಯಾಹ್ನ ಏಮ್ಸ್​​ಗೆ ದಾಖಲಾಗಿದ್ದಾರೆ.

ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದ್ದು, ಅವರು ಸದ್ಯಕ್ಕೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.