ನ್ಯೂಸ್

ಚುನಾವಣಾ ರ್‍ಯಾಲಿ ವೇಳೆ ಅಧ್ಯಕ್ಷ ಅಭ್ಯರ್ಥಿಯ ಮೇಲೆ ದಾಳಿ!: ಕೊಲಂಬಿಯಾದಲ್ಲಿ ಉದ್ವಿಗ್ನತೆ..| Colombia

Colombia : ಅಮೆರಿಕದ ರಾಜ್ಯ ಕೊಲಂಬಿಯಾದ ಬಲಪಂಥೀಯ ವಿರೋಧ ಪಕ್ಷದ ಸೆನೆಟರ್ ಮತ್ತು ಮುಂದಿನ ವರ್ಷದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಮಿಗುಯೆಲ್ ಉರಿಬೆ ಟರ್ಬೆ (39) ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ಘಟನೆ ಕೊಲಂಬಿಯಾದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ.

ಬೊಗೋಟಾದಲ್ಲಿ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅವರು ಪ್ರಸ್ತುತ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಮಿಗುಯೆಲ್ ಉರಿಬೆ ಟರ್ಬೆ ಮೇಲೆ ಗುಂಡು ಹಾರಿಸಲಾಗುತ್ತಿರುವುದು ಕಂಡುಬಂದಿದೆ. ಕೆಲವರು ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ತೋರಿಸಲಾಗಿದೆ.

ಪೊಲೀಸರು ಗುಂಡು ಹಾರಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಿಗುಯೆಲ್ ಉರಿಬೆ ಟರ್ಬೆ ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಅಟಾರ್ನಿ ಜನರಲ್ ಲುಜ್ ಆಡ್ರಿಯಾನಾ ಕ್ಯಾಮಾರ್ಗೊ ಕ್ಯಾರಕೋಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.(ಏಜೆನ್ಸೀಸ್​​)