ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ (Biren Singh) ರಾಜೀನಾಮೆ ನೀಡಿದ ನಾಲ್ಕೇ ದಿನಕ್ಕೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು (President Rule) ಹೇರಲಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ರಾಜೀನಾಮೆ ನೀಡಿದ ನಾಲ್ಕು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದ್ದು, ಸಂಘರ್ಷ ಪೀಡಿತ ಮಣಿಪುರದಲ್ಲಿ ವಿಧಾನಸಭೆ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುತ್ತದೆ.
ಕುಕಿ ಹಾಗೂ ಮೈತೇಯಿ ಸಮುದಾಯದ ನಡುವಿನ ಸಂಘರ್ಷದಲ್ಲಿ ಈವರೆಗೆ 250ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, ಕಳೆದ 21 ತಿಂಗಳಿನಿಂದ ಮಣಿಪುರ ಗಲಭೆಗೆ ನಲುಗಿ ಹೋಗಿದೆ. ಇದೀಗ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವುದರಿಂದ ಉದ್ವಿಗ್ನ ಪರಿಸ್ಥಿತಿ ಹತ್ತೋಟಿಗೆ ಬರುಸ ಸಾಧ್ಯತೆ ಇದೆ.
ಮುಂದಿನ ಮುಖ್ಯಮಂತ್ರಿ ಯಾರನ್ನು ಆಯ್ಕೆ ಮಾಡಬೇಕೆಂದು ಬಿಜೆಪಿ ಹೈಕಮಾಂಡ್ ಒಮ್ಮತದ ನಿರ್ಧಾರಕ್ಕೆ ಬಾರದ ಕಾರಣ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಿರೇನ್ ಸಿಂಗ್ ದೆಹಲಿಯಿಂದ ಹಿಂದಿರುಗಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.