ಗುಂಡ್ಲುಪೇಟೆ: ವ್ಯಾಘ್ರಗಳ ಕಾಡು ‘ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ’ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರಲಿದ್ದಾರೆ. ಹುಲಿ ಯೋಜನೆ (ಟೈಗರ್ ಪ್ರಾಜೆಕ್ಟ್) 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏ.9ರಂದು ಹಮ್ಮಿಕೊಂಡಿರುವ ಮೂರು ದಿನಗಳ ಮೆಗಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಆ ಸಂದರ್ಭದಲ್ಲಿ ಬಂಡೀಪುರಕ್ಕೂ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯುತ್ ಸ್ಪರ್ಶಿಸಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಆನೆ ರಕ್ಷಿಸಿದ್ದವರನ್ನು ಪ್ರಧಾನಿ ಅಭಿನಂದಿಸಲಿದ್ದಾರೆ. ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಡಾ. ರಮೇಶ್ಕುಮಾರ್ ತಿಳಿಸಿದ್ದಾರೆ.