ನ್ಯೂಸ್

ನ.11ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ; ಕಾರ್ಯಕ್ರಮ ಎಲ್ಲೆಲ್ಲಿ? ಇಲ್ಲಿದೆ ವಿವರ..‌.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನ. 11ರಂದು ಬೆಂಗಳೂರು ನಗರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಕಾರ್ಯಕ್ರಮಗಳ ವಿವರ ಇಂತಿದೆ‌.

  • 1. ಶಾಸಕರ ಭವನದ ಆವರಣದಲ್ಲಿರುವ ಶ್ರೀ ಕನಕದಾಸ ಪುತ್ಥಳಿಗೆ ಮಾಲಾರ್ಪಣೆ.
  • 2. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ. (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ)
  • 3. ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಟರ್ಮಿನಲ್-2 ಲೋಕಾರ್ಪಣೆ.
  • 4. ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆ.
  • 5. ವಿಮಾನ ನಿಲ್ದಾಣದ ಹತ್ತಿರದಲ್ಲಿ ಸಾರ್ವಜನಿಕ ಸಭೆ.

ಪ್ರಸ್ತುತ ಈ ಮೇಲಿನ ಕಾರ್ಯಕ್ರಮಗಳಲ್ಲಿ ಕೊನೆಯ ಕ್ಷಣದ ಬದಲಾವಣೆ ಮತ್ತು ಭದ್ರತಾ ದೃಷ್ಟಿಯಿಂದ ಕೆಲವು ಮಾರ್ಪಾಡು ಆಗುವ ಸಾಧ್ಯತೆ ಇದೆ ಮೂಲಗಳು ತಿಳಿಸಿವೆ.