ಬೆಂಗಳೂರು: ಸೋಷಿಯಲ್ ಮೀಡಿಯಾವನ್ನು ಸಮರ್ಥವಾಗಿ ಬಳಸಿಕೊಂಡ ವ್ಯಕ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಮುಖರು. ಇದೀಗ ಅವರು ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಪ್ರಧಾನಿ ಮೋದಿ ತಮ್ಮ ವೈಯಕ್ತಿಕ ಖಾತೆಯಲ್ಲಿ ಇದೀಗ 90 ಮಿಲಿಯನ್ ಅಂದರೆ 9 ಕೋಟಿಗೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಆ ಮೂಲಕ ಟ್ವಿಟರ್ನ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಖಾತೆಗಳ ಟಾಪ್-10 ಪಟ್ಟಿಯಲ್ಲೂ ಅವರು ಸ್ಥಾನ ಹೊಂದಿದ್ದಾರೆ.
ಇದನ್ನೂ ಓದಿ: ವೇದಗಳನ್ನು ಓದಿದವರು ದೊಡ್ಡವರಲ್ಲ, ವೇದನೆಯನ್ನು ಅರಿತವರು ದೊಡ್ಡವರು: ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್
ಟ್ವಿಟರ್ನ ಟಾಪ್-10 ಅತ್ಯಧಿಕ ಫಾಲೋವರ್ಸ್ ಪಟ್ಟಿಯಲ್ಲಿ ಮೋದಿ ಎಂಟನೇ ಸ್ಥಾನದಲ್ಲಿದ್ದು, ಟಾಪ್-10 ಪಟ್ಟಿಯಲ್ಲಿರುವ ಏಕೈಕ ಭಾರತೀಯ ಎಂದೆನಿಸಿಕೊಂಡಿದ್ದಾರೆ. ಮಾತ್ರವಲ್ಲ, ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಭಾರತೀಯ ಕೂಡ ಅವರೇ ಆಗಿದ್ದಾರೆ.
ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವವರ ಪೈಕಿ ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್(14.7 ಕೋಟಿ ಫಾಲೋವರ್ಸ್) ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಬರಾಕ್ ಒಬಾಮ (13.2 ಕೋಟಿ ಫಾಲೋವರ್ಸ್) ಇದ್ದಾರೆ.