ಬೆಂಗಳೂರು: ಪೀಣ್ಯ ಇಸ್ರೋ ನಿಯಂತ್ರಣ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ಮತ್ತು ಸುರಕ್ಷತೆ ಹಿತದೃಷ್ಟಿಯಿಂದ ಶನಿವಾರ (ಆ.26) ಕೆಲ ರಸ್ತೆಗಳ ಸಂಚಾರ ಮಾರ್ಗ ಮಾರ್ಪಾಡು ಮಾಡಲಾಗಿದೆ.
ಶನಿವಾರ ಬೆಳಗ್ಗೆ 4.30 ಗಂಟೆಯಿಂದ 9.30ರ ನಡುವೆ ಸಂಚಾರ ಮಾರ್ಗ ಬದಲು ಮಾಡಲಾಗಿದೆ. ಹಳೆಯ ವಿಮಾನ ನಿಲ್ದಾಣ ರಸ್ತೆ, ಹಳೆ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ(ಮೇಖ್ರಿ ಸರ್ಕಲ್), ಸಿವಿ ರಾಮನ್ ರಸ್ತೆ, ಯಶವಂತಪುರ, ತುಮಕೂರು ರಸ್ತೆ
(ಯಶವಂತಪುರದಿಂದ ನಾಗಸಂದ್ರದನವರೆಗೆ) ಮಾಗಡಿ ರಸ್ತೆ, ಹೊಸವರ್ತುಲ ರಸ್ತೆ (ಗೊರಗುಂಟೆಪಾಳ್ಯ ಜಂಕ್ಷನ್‌ನಿಂದ ಸುಮನಹಳ್ಳಿ) ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಯಲ್ಲಿ ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ನಗರದೊಳಗೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.