ಎಟಿಎನ್‌ಸಿ ಕಾಲೇಜು ವಿದ್ಯಾರ್ಥಿಗಳು ಕಾಲೇಜಿನ ಪ್ರಾಚಾರ್ಯರ ಅಸಹಕಾರ ಮನೋಭಾವ ಖಂಡಿಸಿ ಪ್ರತಿಭಟನೆ ನಡೆಸಿದರು. ವಿಜಯ್. ರವಿ, ರವಿ ಕಾಟಿಕೆರೆ, ಶ್ರೀಕಾಂತ್, ಪಂಕಲ್, ಅಂಜನ್ ಇತರರಿದ್ದರು. 
ನ್ಯೂಸ್

ಸೌಲಭ್ಯ ಬಳಕೆಗೆ ಪ್ರಾಚಾರ್ಯರ ಅಸಹಕಾರ: ಪ್ರತಿಭಟನೆ

ಅರವಿಂದ ಅಕ್ಲಾಪುರ

ಶಿವಮೊಗ್ಗ: ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಬಳಸಿಕೊಳ್ಳಲು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಪ್ರಾಚಾರ್ಯರು ಸಹಕಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಗುರುವಾರ ಎನ್‌ಎಸ್‌ಯುಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಗ್ರಾಮೀಣ ಪ್ರದೇಶದ ಹಲವಾರು ವಿದ್ಯಾರ್ಥಿಗಳು ಎಟಿಎನ್‌ಸಿ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ಬಸ್ ಪಾಸ್ ಸೌಲಭ್ಯ ಪಡೆದುಕೊಳ್ಳಲು ಪ್ರಾಚಾರ್ಯರ ಸಹಿ ಅಗತ್ಯ. ಇದಕ್ಕಾಗಿ ಪ್ರಾಚಾರ್ಯರ ಬಳಿ ವಿದ್ಯಾರ್ಥಿಗಳು ತೆರಳಿದಾಗ ಸಹಿ ಹಾಕದೆ ಸತಾಯಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಚಾರ್ಯರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ನಿಂದಿಸುವುದು, ಹಂಗಿಸುವುದು ಮಾಡುತ್ತಿದ್ದಾರೆ. ಎನ್‌ಇಎಸ್ ಆಡಳಿತ ಮಂಡಳಿಯು ಸದರಿ ಪ್ರಾಚಾರ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಗಬೇಕಾದ ಸವಲತ್ತುಗಳನ್ನು ಪಡೆಯಲು ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರಾಧ್ಯಕ್ಷ ರವಿ, ಪ್ರಧಾನ ಕಾರ್ಯದರ್ಶಿ ಆದಿತ್ಯ, ಪ್ರಮುಖರಾದ ಚಂದ್ರೋಜಿ ರಾವ್, ವರುಣ್ ಪಂಡಿತ್, ಸುಭಾನ್, ಶ್ರೀಕಾಂತ್, ಪಂಕಜ್, ಅಂಜನ್ ಪ್ರತಿಭಟನೆಯಲ್ಲಿದ್ದರು.