ಹುಬ್ಬಳ್ಳಿ: ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರ ಆಗುತ್ತಾ ನಾವು ಟೀಕೆ ಮಾಡಿದರೆ ಬಿಜೆಪಿಯವರು ನಮ್ಮನ್ನು ಹಿಂದೂ ವಿರೋಧಿ ಎಂದು ಹೇಳುತ್ತಾರೆ. ಕೇವಲ ಗಂಗಾ ಅಷ್ಟೇ ಅಲ್ಲ, ಯಾವ ನದಿಯಲ್ಲೂ ಮುಳುಗೆದ್ದರೂ ಪಾಪ ಪರಿಹಾರ ಆಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ (Priyank Kharge) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಹಿಂದು ಧರ್ಮದಲ್ಲಿ ಸಮಾನತೆ , ಸ್ಬಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ನಮ್ಮ ದೇಶದಲ್ಲಿ ಬುದ್ದಿಸಂ, ಜೈನಿಂ, ಸಿಖ್ ಹಾಗೂ ಲಿಂಗಾಯತ ಧರ್ಮಗಳು ಹುಟ್ಟಿಕೊಂಡವು. ಈ ನಾಲ್ಕು ಧರ್ಮಗಳು ಹುಟ್ಟಿದ್ದು ಹಿಂದೂ ಧರ್ಮದ ವಿರುದ್ಧವಾಗಿ. ಹಾಗಾದರೆ ಬಸವಣ್ಣ ಅವರು ದೇಶ ದ್ರೋಹಿ ನಾ? ಹಿಂದೂ ವಿರೋಧಿನಾ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ಮೂರುವರೆ ವರ್ಷ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರಲಿದೆ. ಒಳ್ಳೆಯ ಆಡಳಿತ ಕೊಡುತ್ತೇವೆ. ಸರ್ಕಾರಕ್ಕೆ ಏನು ಆಗಲ್ಲ. ರಾಜ್ಯ ಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾಧ್ಯಮದವರು ಧ್ವನಿ ಎತ್ತಬೇಕು. ಪಕ್ಷದ ಮುಖಂಡರು ಪ್ರತ್ಯೇಕವಾಗಿ ಸಭೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ನಮ್ಮ ಮನೆಗೆ, ನಾವು ಅವರ ಮನೆಗೆ ಹೋಗಲೇ ಬಾರದಾ 2-3 ದಿನಕ್ಕೊಮ್ಮೆ ನಾನು ಗೃಹ ಸಚಿವರ ಮನೆಯಲ್ಲೇ ಇರ್ತೇನೆ ನಮ್ಮ ಪಕ್ಷದವರು ಕೂಡ ಹೋಗಬಾರದು ಅಂದ್ರೆ ಹೇಗೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.