ನವದೆಹಲಿ: ಕಳೆದ ನವೆಂಬರ್ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಮಕ್ಕಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿಗೆ ನೀಡಲಾಗಿದ್ದ ಎಸ್ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದು, ಅವರಿಗೆ Z ಪ್ಲಸ್ ಭದ್ರತೆಯನ್ನು ನೀಡಿತ್ತು.
ಇದೀಗ ಪ್ರಿಯಾಂಕಾ ಗಾಂಧಿಯವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೆಹಲಿಯ ಲೋಧಿ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆಯನ್ನು ಆಗಸ್ಟ್ 1ರ ಒಳಗೆ ಖಾಲಿ ಮಾಡುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: ನನ್ನ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವುದನ್ನು ಬಿಡಿ, ನನ್ನ ಆತ್ಮೀಯರಲ್ಲಿ ಹಾರ್ಟ್ ಪೇಷೆಂಟ್ಸ್ ಇದ್ದಾರೆ: ಎಸ್.ಜಾನಕಿ
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಿಯಾಂಕಾ ಗಾಂಧಿಯವರಿಗೆ ಪತ್ರವನ್ನು ಕಳಿಸಿದ್ದು, ಅದರಲ್ಲಿ ನಿಮಗೆ ನೀಡಲಾಗಿದ್ದ ಎಸ್ಪಿಜಿ ಭದ್ರತೆಯನ್ನು ವಾಪಸ್ ಪಡೆದು, Zಪ್ಲಸ್ ಭದ್ರತೆ ನೀಡಲಾಗಿದೆ. ಇದರಿಂದ ನಿಯಮದ ಪ್ರಕಾರ ನಿಮಗೆ ಸರ್ಕಾರಿ ಮನೆಯನ್ನು ನೀಡಲು ಸಾಧ್ಯವಿಲ್ಲ. ಹಾಗಾಗಿ ಇಷ್ಟು ದಿನ ನಿಮಗೆ ನೀಡಲಾಗಿದ್ದ ಲೋಧಿ ಎಸ್ಟೇಟ್ನಲ್ಲಿರುವ ಟೈಪ್ 6ಬಿ, ಮನೆ ಸಂಖ್ಯೆ 35ನ್ನು ವಾಪಸ್ ಪಡೆಯುತ್ತಿದ್ದೇವೆ. ಆಗಸ್ಟ್ ಒಂದರ ಒಳಗೆ ಮನೆ ಖಾಲಿ ಮಾಡಬೇಕು ಎಂದು ಪತ್ರದಲ್ಇ ಉಲ್ಲೇಖಿಸಲಾಗಿದೆ. ಆಗಸ್ಟ್ 1 ರ ನಂತರವೂ ಮನೆ ಬಿಟ್ಟುಕೊಡದೆ ಇದ್ದರೆ ದಂಡ ವಿಧಿಸಲಾಗುವುದು ಎಂದೂ ಕೂಡ ಪತ್ರದಲ್ಲಿ ಉಲ್ಲೇಖಿಸಲಾಗಿದೆ. (ಏಜೆನ್ಸೀಸ್)