ನ್ಯೂಸ್

ಹಿರಿಯ ವಿದ್ವಾಂಸ ಪ್ರೊ.ಮಲೆಯೂರು ಗುರುಸ್ವಾಮಿ ವಿಧಿವಶ

ಚಾಮರಾಜನಗರ: ಹಿರಿಯ ವಿದ್ವಾಂಸ ಪ್ರೊ. ಮಲೆಯೂರು ಗುರುಸ್ವಾಮಿ (76) ವಿಧಿವಶ ಆಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಲೆಯೂರು ಗುರುಸ್ವಾಮಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ರಾಜ್ಯಾಧ್ಯಕ್ಷರೂ ಆಗಿದ್ದರು.

ಮೈಸೂರು ಜೆಎಸ್ಎಸ್ ಮಹಾವಿದ್ಯಾಪೀಠದ ಬಳಿ ಇಂದು ಬೆಳಿಗ್ಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ ಚಾಮರಾಜನಗರ ತಾಲೂಕಿನ ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.