ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ೧೨೮ ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಲಾಗಿದೆ. ಬೇಸಿಗೆಯ ಬಿಸಿಲಿನಲ್ಲಿ ಅವುಗಳಿಗೆ ಕುಡಿಯುವ ನೀರೊದಗಿಸುವ ತೊಟ್ಟಿಗಳನ್ನು ಇಡಲಾಗುತ್ತಿದೆ. ಪ್ರತಿಯೊಬ್ಬರೂ ಪಕ್ಷಿ ಸಂಕುಲವನ್ನು ಕಾಪಾಡಬೇಕು ಎಂದು ಕುಲಪತಿ ಪ್ರೊ. ಕೆ.ಬಿ. ಗುಡಸಿ ಹೇಳಿದರು.
ನಗರದ ಕರ್ನಾಟಕ ವಿಶ್ವವಿದ್ಯಾಲಯ ಆವರಣದ ಉದ್ಯಾನದಲ್ಲಿ ನೀರಿನ ತೊಟ್ಟಿ ಮತ್ತು ಆಹಾರ ಧಾನ್ಯ ಇಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕುಲಸಚಿವ ಡಾ. ಎ. ಚೆನ್ನಪ್ಪ ಮಾತನಾಡಿ, ನಮ್ಮ ಪೂರ್ವಜರು ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಿ ಪ್ರಾಣಿ, ಪಕ್ಷಿ ಸಂಕುಲಕ್ಕೆ ನೆರವಾಗಿದ್ದಾರೆ. ಸದ್ಯ ಬಿಸಿಲು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪೂರ್ವಜರ ಪರಿಪಾಲನೆ ಮುಂದುವರಿಸಬೇಕು ಎಂದರು.
ಮೌಲ್ಯಮಾಪನ ಕುಲಸಚಿವ ಪ್ರೊ. ನಿಜಲಿಂಗಪ್ಪ ಮಟ್ಟಿಹಾಳ ಮಾತನಾಡಿ, ಸಕಲ ಜೀವಾತ್ಮರಿಗೆ ಲೇಸನ್ನು ಬಯಸುವುದು ನಿಜವಾದ ಧರ್ಮ. ಪ್ರತಿಯೊಬ್ಬರೂ ಮನೆಗಳ ಆವರಣದಲ್ಲಿ ನೀರು ಇಡುವ ಮೂಲಕ ಪಕ್ಷಿಗಳ ನೀರಿನ ದಾಹ ನೀಗಿಸಬೇಕು ಎಂದರು.
ಬಾಟನಿಕಲ್ ಗಾರ್ಡನ್ ವಿಭಾಗದ ಮುಖ್ಯಸ್ಥ ಡಾ. ಎಸ್.ಎಸ್. ಮುಳಗುಂದ, ಎನ್‌ಎಸ್‌ಎಸ್ ಅಽಕಾರಿ ಡಾ. ಎಂ.ಬಿ. ದಳಪತಿ, ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.