ನ್ಯೂಸ್

ಸಂಸತ್ತಿನಲ್ಲಿ ಕಷಿ ಕಾಯ್ದೆ ರದ್ದತಿಗೆ ಪಟ್ಟು : ಹೆದ್ದಾರಿ ಬಂದ್ ಮಾಡಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Kolar

ಕೋಲಾರ :  ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕಷಿ ಕಾಯ್ದೆಗಳನ್ನು ಪ್ರಧಾನಿ ಮೋದಿ ರದ್ದು ಮಾಡಿದ್ದಾರಾದರೂ ಸಂಸತ್ತಿನಲ್ಲಿ ಕಾಯ್ದೆ ಅಂಗೀಕಾರ ಪಡೆದಿರುವುದರಿಂದ ಅಲ್ಲೇ ಈ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ವಿವಿಧ ಸಂಟನೆಗಳಿಂದ ಶುಕ್ರವಾರ ಹೆದ್ದಾರಿ ಬಂದ್ ವಾಡಿ ಪ್ರತಿಭಟನೆ ನಡೆಸಲಾಯಿತು.

ಮೂರು ಕಷಿ ಕಾಯ್ದೆ ರದ್ದತಿಯ ೋಷಣೆ ಸಂಸತ್ ಅದಿವೇಶನದಲ್ಲಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ವಾಡಿ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ 50 ಲಕ್ಷ ಪರಿಹಾರ ಹಾಗೂ ರೈತರ ಮೇಲಿನ ಕೇಸು ವಾಪಸ್ ಪಡೆಯಬೇಕು ಹಾಗೂ ರಾಜ್ಯ ಸರ್ಕಾರ ತಂದಿರುವ ರೈತ ವಿರೋದಿ ಕಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಸಾಮೂಹಿಕ ನಾಯಕತ್ವದ ರೈತ ಸಂದಿಂದ ಎತ್ತಿನಬಂಡಿ ನೇಗಿಲು, ಕೋಳಿ, ಬೆಳೆಗಳ ಸಮೇತ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಯಿತು.

ಕಾಯ್ದೆ ವಿರುದ್ಧ ಹೋರಾಟ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕರೆಯಂತೆ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರ ಕಷಿ ಕಾಯ್ದೆ ಹಿಂದಕ್ಕೆ ಪಡೆದಿರುವ ೋಷಣೆ ಕಾರ್ಪೋರೇಟ್ ವಿರೋಧಿ ರೈತ ಚಳವಳಿಗೆ ಸಿಕ್ಕ ಜಯ ಎಂದು ರೈತ ಸಂದ ಉಪಾಧ್ಯಕ್ಷ ನಾರಾಯಣಗೌಡ ಹೇಳಿದರು.

ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ ಮಾತನಾಡಿ, ಕೇಂದ್ರ ಸರ್ಕಾರ ಕಷಿ ಕಾಯ್ದೆ ವಾಪಸ್ ಪಡೆದಂತೆ ರಾಜ್ಯ ಸರ್ಕಾರವು ವಿದ್ಯುತ್ ಮಸೂದೆ ಎಪಿಎಂಸಿ ಕಾಯ್ದೆ, ಭೂ ಸುದಾರಣೆ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ, ಶ್ರೀನಿವಾಸಪುರದ ಅಧ್ಯಕ್ಷ ತೆರ‌್ನಹಳ್ಳಿ ಆಂಜಿನಪ್ಪ, ವಾಲೂರಿನ ಪೆಮ್ಮದೊಡ್ಡಿ ಯಲ್ಲಣ್ಣ ಮುಂತಾದವರು ಉಪಸ್ಥಿತರಿದ್ದರು.

ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರೈತ ಸಂದಿಂದಲೂ ಪ್ರತಿಭಟನೆ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಯುವ ಮುಖಂಡ ಕಲ್ವಮಂಜಲಿ ರಾಮು ಶಿವಣ್ಣ ಇನ್ನಿತರರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.