ರಾಜ್ಯ ಸರ್ಕಾರದ ಹಿಂದು ವಿರೋಧಿ ನೀತಿ ಖಂಡಿಸಿ ಜಿಲ್ಲಾ ಶ್ರೀರಾಮಸೇನೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.  
ನ್ಯೂಸ್

ರಾಜ್ಯ ಸರ್ಕಾರದ ಹಿಂದು ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ಕೋಲಾರ: ರಾಜ್ಯ ಸರ್ಕಾರದ ಹಿಂದು ವಿರೋಧಿ ನೀತಿ ಖಂಡಿಸಿ ಹಾಗೂ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಶ್ರೀರಾಮಸೇನಾ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಅರುಣ್​ಪ್ರಕಾಶ್​ ಮಾತನಾಡಿ, ರಾಜ್ಯ ಸರ್ಕಾರವು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ನೀಡುತ್ತಾ ಸಂಘಟನೆ ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ. ಮುಂದಿನ ದಿನಗಳಲ್ಲಿ ಸರ್ಕಾರ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾಧಿಕಾರಿಗಳ ಪರವಾಗಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮನವಿಯನ್ನು ಸ್ವೀಕರಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ನೀಡುವುದಾಗಿ ತಿಳಿಸಿದರು.
ಕೋಲಾರ ವಿಭಾಗ ಅಧ್ಯಕ್ಷ ರಮೇಶ್​ರಾಜ್​ ಆರಸ್​, ಜಿಲ್ಲಾ ಯೋಗ ರವಿ, ಶಂಕರ್​, ಪ್ರಮುಖರಾದ ನವೀನ್​, ನಾಗೇಂದ್ರ ಶ್ರೀಕಾಂತ್​, ಸುಭಾಷ್​, ಕಾರ್ತಿಕ್​ ವಿನೋದ್​ ಇದ್ದರು.