ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ಧ ಹಾಗೂ ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ನಡೆಸಿದರು. 
ನ್ಯೂಸ್

ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಗುಂಡ್ಲುಪೇಟೆ: ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಬುದ್ಧ ಹಾಗೂ ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ನಂತರ ಮುಖಂಡ ಮಹಾದೇವಪ್ಪ ಮಾತನಾಡಿ, ಗ್ರಾಮದಲ್ಲಿ ದುಷ್ಕರ್ಮಿಗಳು ಮಹಾನ್ ಮಾನವತಾವಾದಿಗಳಾದ ಗೌತಮ ಬುದ್ಧ ಹಾಗೂ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ವಿರೂಪಗೊಳಿಸಿ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಬೇಕು ಎಂದು ಒತ್ತಾಯಿಸಿದರು.