ನ್ಯೂಸ್

ಬೆಂಗಳೂರು ಬಂದ್​; ಪ್ರತಿಭಟನೆಯಿಂದ ಸಮಸ್ಯೆ ಬಗೆಹರಿಯಲ್ಲ: ಎಚ್​.ಡಿ. ದೇವೇಗೌಡ

ಮೋಹನ್​ ಶೆಟ್ಟಿ

ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬೆಂಗಳೂರಿನಾದ್ಯಂತ ಮಂಗಳವಾರ (ಸೆ.26) ಪ್ರತಿಭಟನೆ ನಡೆಸಲು ಕನ್ನಡ ಪರ ಸಂಘಟನೆಗಳು ಮುಂದಾಗಿದ್ದು, ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠರಾದ ಎಚ್​.ಡಿ.ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.

"ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಾಳೆ (ಸೆ.26) ಬೆಂಗಳೂರು ಬಂದ್​ಗೆ ಕರೆ ಕೊಟ್ಟಿದ್ದಾರೆ. ಪ್ರತಿಭಟನೆ ಶಾಂತಿಯಿಂದ ನಡೆಯಬೇಕು. ಪ್ರತಿಭಟನೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮನಸ್ಸಿನಲ್ಲಿರುವ ನೋವನ್ನು ವ್ಯಕಪಡಿಸಲು ಇದನ್ನು ಮಾಡುತ್ತಿದ್ದಾರೆ ಅಷ್ಟೇ" ಎಂದು ಹೇಳಿದರು.

"ತಮಿಳುನಾಡು ಅಣ್ಣ-ತಮ್ಮಂದಿರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಎಚ್.ಡಿ. ಕುಮಾರಸ್ವಾಮಿ ಡ್ಯಾಂಗೆ ತೆರಳಿ ಮಾಹಿತಿ ನೀಡಿದ್ದಾರೆ. ಈ ಕುರಿತು ನಾನು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರದಿದ್ದೇನೆ. ಪ್ರಧಾನಿಗಳು ಖಂಡಿತವಾಗಿ ಇದಕ್ಕ ಪ್ರತಿಕ್ರಿಯೆ ನೀಡುತ್ತಾರೆ ಎಂಬ ನಂಬಿಕೆಯಿದೆ, ಅದನ್ನು ಈಗಲೂ ನಂಬುತ್ತೇನೆ, ನಾಳೆಯೂ ನಂಬುತ್ತೇನೆ" ಎಂದು ಹೇಳಿದ್ದಾರೆ.