ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತವರು ಕ್ಷೇತ್ರದಲ್ಲಿ ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಉದ್ಯಮಿಗಳು ಹಾಗೂ ವ್ಯಾಪಾರಸ್ಥರು ಬಂದ್ ಆಚರಿಸಿ ಪ್ರತಿಭಟನೆ ನಡೆಸಿದರು.
-ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಬಂದ್
ನಗರದ ಕೈಗಾರಿಕೆ ಪ್ರದೇಶ, ಎಪಿಎಂಸಿ ಸೇರಿದಂತೆ ವಿವಿಧೆಡೆ ವ್ಯಾಪಾರ, ವಹಿವಾಟು ಮತ್ತು ಉತ್ಪಾದನೆ ಸ್ಥಗಿತಗೊಳಿಸಿ ಆಕ್ರೋಶ ಹೊರಹಾಕಲಾಯಿತು. ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವಿದ್ಯುತ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ. ಪಾಟೀಲ್, ಕೆಇಆರ್ ಸಿ ವಿದ್ಯುತ್ ಬಿಲ್ ಹೆಚ್ಚಿಸಿದೆ. ಈ ಹಿಂದಿನ ಸರ್ಕಾರದಲ್ಲಿಯೇ ಈ ದರ ಹೆಚ್ಚಿಸಲಾಗಿತ್ತು. ಕೆಇಆರ್ ಸಿ ಒಂದು ಸ್ವಾಯತ್ತ ಸಂಸ್ಥೆ. ಅದಕ್ಕೂ ಸರ್ಕಾರ ಕ್ಕೂ ಸಂಬಂಧ ಇಲ್ಲ. ಆದರೂ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ನಾನೂ ಸಹ ಸಿಎಂ ಮತ್ತು ಇಂಧನ ಸಚಿವರನ್ನು ಸಂಪರ್ಕಿಸುವುದಾಗಿ ತಿಳಿಸಿದರು.
ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಬಡವರ ಅನ್ನದ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಕೇಂದ್ರ ಸರ್ಕಾರಕ್ಕೆ ಸಿಎಂ ಪತ್ರ ಬರೆದಾಗ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ ಎಂದಿದ್ದರು. ಇದೀಗ ಅಕ್ಕಿ ಕೊಡಲು ನಿರಾಕರಿಸಲಾಗುತ್ತಿದೆ ಎಂದು ಹರಿಹಾಯ್ದರು. ಅಕ್ಕಿ ಬದಲಿ ರಾಗಿ, ಜೋಳ ಕೊಡುವ ಯೋಚನೆ ಇದೆ.ಆದರೆ ಅಷ್ಟೊಂದು ಪ್ರಮಾಣದಲ್ಲಿ ರಾಗಿ, ಜೋಳ ಸಿಗಬೇಕಲ್ಲ? ಎಂದ ಸಚಿವ ಎಂ.ಬಿ. ಪಾಟೀಲ್ ಅಪ್ರಾಯೋಗಿಕವಾಗಿ ಮಾತನಾಡುವುದನ್ನು ಬಿಟ್ಟು ಪ್ರಾಯೋಗಿಕವಾಗಿ ವಿಚಾರ ಮಾಡಬೇಕೆಂದರು.
ಇದೇ ತಿಂಗಳು 27 ರ ನಂತರ ಕೈಗಾರಿಕಾ ಇಲಾಖೆಗೆ ಸಂಬಂಧಿಸಿದಂತೆ ಅಂತಿಮ ಸಭೆ ನಡೆಸಿ ಕಾರ್ಯಕ್ರಮಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದರು.
ಸಿಎಂ ಜೊತೆ ವಿವಿಧ ಸಚಿವರು ದೆಹಲಿಗೆ ಭೇಟಿ ನೀಡಿ ತಮ್ಮ ಇಲಾಖೆಗಳ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ