ನ್ಯೂಸ್

ಪಿಎಸ್ಐ ಅಭ್ಯರ್ಥಿಗಳ ಪ್ರತಿಭಟನೆ: ತನಿಖೆ ಮುಗಿಯೋವರೆಗೂ ಸಮಾನಧಾನವಾಗಿ ಇರಿ ಅಂದ್ರು ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮರು ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಪಿಎಸ್​​ಐ ಅಭ್ಯರ್ಥಿಗಳ ಕೈಗೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಮನವಿ ಆಲಿಸಿದ್ದಾರೆ.

ಫ್ರೀಡಂಪಾರ್ಕ್​ನಲ್ಲಿ ಅಭ್ಯರ್ಥಿಗಳು ಹಾಗೂ ಪೋಷಕರಿಂದ ಪ್ರತಿಭಟನೆ ಕೈಗೊಳ್ಳಲಾಗಿದ್ದು, ಸ್ಥಳಕ್ಕೆ ಬಂದ ಮುಖ್ಯಮಂತ್ರಿ, ತನಿಖೆಯಾಗುವವರೆಗೂ ಸಮಾಧಾನದಿಂದ ಇರುವಂತೆ ಅಭ್ಯರ್ಥಿಗಳಿಗೆ ತಿಳಿಸಿದರು.

ತನಿಖೆ ಹಂತದಲ್ಲಿರುವಾಗ ಯಾವುದೇ ಭರವಸೆ ಕೊಡಲು ಸಾಧ್ಯವಿಲ್ಲ. ಹಾಗಾಗಿ ತನಿಖೆ ಪೂರ್ಣಗೊಳ್ಳುವವರೆಗೂ ಕಾಯಲೇಬೇಕು. 545 ಅಭ್ಯರ್ಥಿಗಳ ಮನವಿ ಪತ್ರವನ್ನು ಸಂಪೂರ್ಣವಾಗಿ ಪರಿಶೀಲಿಸುವುದಾಗಿ ಹೇಳಿದರು.

ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಕಾತಿ ಆದೇಶ ನೀಡಬೇಕು, ನಾವು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸ್​ ಆಗಿದ್ದೇವೆ. ದಯವಿಟ್ಟು ನಮಗೆ ನೇಮಕಾತಿ ಮಾಡಿಕೊಳ್ಳಿಎಂದು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)