ಬೆಂಗಳೂರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆದ 33 ದಿನಗಳಲ್ಲೇ ಪ್ರಕಟಿಸಿದೆ.
ಅ.3ರಂದು ನಡೆದ ಪರೀಕ್ಷೆಯ ಪತ್ರಿಕೆ - 1 ಮತ್ತು 2ರಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ವಿವರಗಳನ್ನು ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆಗಳನ್ನು ನ.9ರೊಳಗೆ ಅನ್‌ಲೈನ್ ಮೂಲಕ ಸಲ್ಲಿಸಬಹುದು.
ಒಟ್ಟು 402 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ಕೂಡ ವೆಬ್ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.