ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ 11 ಆರೋಪಿಗಳಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಇಂದು(ಶುಕ್ರವಾರ) ಜಾಮೀನು ಮಂಜೂರು ಮಾಡಿದೆ.
ಮಮ್ತೇಶ್ ಗೌಡ, ದಿಲೀಪ್, ಸೋಮಶೇರ್, ಜಾಗೃತ್, ರಚನಾ ಸೇರಿ 11 ಮಂದಿಗೆ ಜಾಮೀನು ಮಂಜೂರಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಬಂಧನ ಮಾಡಲಾಗಿತ್ತು. ಸರ್ಕಾರಿ ಅಧಿಕಾರಿಗಳು ಆಗದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಬರೋದಿಲ್ಲ. ಹೀಗಾಗಿ ಜಾಮೀನು ನ್ಯಾಯಾಲಯ ಮಂಜೂರು ಮಾಡಿದೆ.