ನ್ಯೂಸ್

ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣ: ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಂಧನ

ಬೆಂಗಳೂರು: ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳಿಂದ ಮತ್ತೊರ್ವ ಆರೋಪಿ ಬಂಧನವಾಗಿದೆ.

ಬಂಧಿತ ಆರೋಪಿಯನ್ನು ವಿಜಯ್ ಕುಮಾರ್ ಹೆಬ್ಬಾಳ್ಕರ್ ಎಂದು ಗುರುತಿಸಲಾಗಿದೆ. ಇವರು ಕಲಬುರ್ಗಿ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಪಕರಾಗಿ ಕೆಲಸ ಮಾಡುತ್ತಿದ್ದರು. ಪಿಎಸ್ಐ ಪರೀಕ್ಷೆ ಹಿಂದಿನ ದಿನ ಕಾಲೇಜು ಕಟ್ಟಡಕ್ಕೆ ಅಕ್ರಮವಾಗಿ ಪ್ರವೇಶಿಸಿ ಬ್ಲೂಟೂತ್ ಇಡಲು ಸಹಾಯ ಮಾಡಿದ್ದ ಕೇಳಿಬಂದಿದೆ.

ಪ್ರಕರಣದ ಕಿಂಗ್​ ಪಿನ್​ ಆರ್​ಡಿ ಪಾಟೀಲ್ ಸೂಚನೆಯ ಪ್ರಕಾರ ವಿಜಯ್​​​ ಕುಮಾರ್​, ಅಭ್ಯರ್ಥಿಗಳಿಗೆ ಸಹಾಯ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. (ದಿಗ್ವಿಜಯ ನ್ಯೂಸ್​)