ಸಾಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ 5 ನೂತನ ಕೊಠಡಿಗಳ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಅನಿಲ್, ಬಿ.ಎ.ಇಂದೂಧರ್, ಟಿ.ಪಿ.ರಮೇಶ್, ಕೆ.ಸಿ.ಸತ್ಯನಾರಾಯಣ, ಭವ್ಯಾ ಇತರರಿದ್ದರು.  
ನ್ಯೂಸ್

ಪಿಯು ಕಾಲೇಜು ಸುವರ್ಣ ಮಹೋತ್ಸವ ಶೀಘ್ರ

ಸಾಗರ: ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿಗೆ 1.50 ಕೋಟಿ ರೂ. ಮಂಜೂರಾಗಿದೆ. ಐದು ನೂತನ ಕೊಠಡಿಗಳ ನಿರ್ಮಾಣದ ಜತೆಗೆ ಕಾಲೇಜಿಗೆ ಸುಣ್ಣ-ಬಣ್ಣ ಹೊಡೆಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಪಿಡಬ್ಲುೃಡಿಯಿಂದ 95 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ 5 ನೂತನ ಕೊಠಡಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಸರ್ಕಾರಿ ಪಿಯು ಕಾಲೇಜಿನಲ್ಲಿ 2600 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಪ್ರೌಢಶಾಲೆಯಲ್ಲೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಕೊಠಡಿ ಕೊರತೆ ಬಗ್ಗೆ ದೂರುಗಳಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಮನವಿ ಮಾಡಿಕೊಂಡ ಮೇರೆಗೆ ಇಲಾಖೆಯಿಂದ ಹಣ ಬಿಡುಗಡೆಯಾಗಿದೆ. ಕಾಮಗಾರಿಯನ್ನು ಶೀಘ್ರ ಮುಗಿಸಲು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಲೇಜಿನ ಸುವರ್ಣ ಮಹೋತ್ಸವ ನಡೆಸಬೇಕಾಗಿದ್ದು, ಹಳೇ ವಿದ್ಯಾರ್ಥಿಗಳ ಸಭೆ ಕರೆಯಲಾಗುವುದು ಎಂದರು.

ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜತೆಗೆ ಶೈಕ್ಷಣಿಕ ವಾತಾವರಣವನ್ನೂ ಉತ್ತಮಗೊಳಿಸಲಾಗುತ್ತಿದೆ. ಪಾಲಕರು ಸರ್ಕಾರಿ ಶಾಲಾ ಕಾಲೇಜಿಗೆ ಮಕ್ಕಳನ್ನು ಸೇರಿಸಬೇಕು ಎಂದು ಮನವಿ ಮಾಡಿದರು.

ಪಿಡಬ್ಲುೃಡಿ ಎಇಇ ಅನಿಲ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ್, ಟಿ.ಪಿ.ರಮೇಶ್, ಪ್ರಾಚಾರ್ಯ ಕೆ.ಸಿ.ಸತ್ಯನಾರಾಯಣ, ಪ್ರಮುಖರಾದ ಪರಿಮಳಾ, ರವಿಕುಮಾರ್, ಭವ್ಯಾ, ಪ್ರಭಾವತಿ, ಕಲಸೆ ಚಂದ್ರಪ್ಪ ಇತರರಿದ್ದರು.