ಪುಣೆ: ಕಳೆದ ಒಂದು ವಾರದ ಹಿಂದೆ ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ ಬೈಕ್ನಲ್ಲಿದ್ದ ಸಾಫ್ಟ್ವೇರ್ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ್ದಲ್ಲದೇ, ಇಬ್ಬರ ಜೀವ ಬಲಿಪಡೆದ ಅಪ್ರಾಪ್ತ ಬಾಲಕನನ್ನು ಸಾರ್ವಜನಿಕರ ಆಕ್ರೋಶದ ಮೇರೆಗೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದರು. ಇದಾದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಇದನ್ನೂ ಓದಿ: ಟ್ರಾವಿಸ್ ಹೆಡ್ ಬ್ಯಾಟಿಂಗ್ ಇವರಿಬ್ಬರ ಮೇಲೂ ಪರಿಣಾಮ ಬೀರಿದೆ: ಇಂಗ್ಲೆಂಡ್ನ ಮಾಜಿ ಆಟಗಾರ ಹೇಳಿದ್ದಿಷ್ಟು
ಈ ವೇಳೆ ಬಾಲಕನನ್ನು ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಿದಾಗ ಒಂದೊಂದೇ ಬೆಚ್ಚಿಬೀಳಿಸುವ ಸಂಗತಿಗಳು ಬೆಳಕಿಗೆ ಬಂದಿವೆ. ಇದೀಗ ಅಧಿಕಾರಿಗಳು ಮತ್ತೊಂದು ಅನಿರೀಕ್ಷಿತ ಟ್ವಿಸ್ಟ್ ಅನ್ನು ಕಂಡುಹಿಡಿದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅಪ್ರಾಪ್ತ ಬಾಲಕನ ರಕ್ತದ ಮಾದರಿ ಪರೀಕ್ಷೆಯ ವರದಿಯನ್ನು ಇಬ್ಬರು ವೈದ್ಯರು ಬದಲಾಯಿಸಿರುವುದು ಪತ್ತೆಯಾಗಿದೆ. ಈ ಸಂಬಂಧ ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇದೀಗ ಬಂದಿರುವ ಮಾಹಿತಿ ಪ್ರಕಾರ, ಬಂಧಿತರಾದ ಇಬ್ಬರು ವೈದ್ಯರು ಆಸ್ಪತ್ರೆಯ ಸಿಬ್ಬಂದಿಗೆ ಬಾಲಕನ ಅಸಲಿ ರಕ್ತದ ಮಾದರಿಯನ್ನು ಬದಲಾಯಿಸಲು ಬರೋಬ್ಬರಿ ಮೂರು ಲಕ್ಷ ರೂ. ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಈ ಸ್ಫೋಟಕ ವಿಷಯ ಹೊರಬೀಳುತ್ತಿದ್ದಂತೆ ಪುಣೆ ಕ್ರೈಂ ಬ್ರಾಂಚ್ ಅಧಿಕಾರಿಗಳು ಆರೋಪಿಗಳೀಂದ ನಗದನ್ನು ವಶಪಡಿಸಿಕೊಂಡಿದ್ದಾರೆ,(ಏಜೆನ್ಸೀಸ್).