ಲಖನೌ: ಪಬ್ಜಿ ಆಡುವುದನ್ನು ತಡೆದಿದ್ದಕ್ಕೆ ಆಕ್ರೋಶಗೊಂಡ 16 ವರ್ಷದ ಹುಡುಗ ಹೆತ್ತ ತಾಯಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.
ಮನೆಯಲ್ಲಿದ್ದ ತಂದೆ ಪಿಸ್ತೂಲ್ ತೆಗೆದುಕೊಂಡು ತಾಯಿಗೆ ಗುಂಡು ಹಾರಿಸಿದ್ದಾನೆ. ಆರೋಪಿ ಹುಡುಗ ಪಬ್ಜಿ ಗೇಮ್ಗೆ ದಾಸನಾಗಿದ್ದ ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋದಾಗ ಹುಡುಗನ ತಾಯಿ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿದ್ದಳು. ಈ ವೇಳೆ ಆರೋಪಿಯ ವಿಚಾರಣೆ ನಡೆಸಿದಾಗ ಆತ ತನಿಖೆಯ ದಾರಿ ತಪ್ಪಿಸಲು ಯತ್ನಿಸಿದ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯನ್ನು ಸದ್ಯ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ವಿವರವಾಗಿ ತನಿಖೆ ಮಾಡಲಾಗುವುದು ಎಂದು ಪೂರ್ವ ಲಖನೌದ ಎಡಿಸಿಪಿ ಖಾಸಿಮ್ ಅಬಿದಿ ತಿಳಿಸಿದ್ದಾರೆ. (ಏಜೆನ್ಸೀಸ್)