ನ್ಯೂಸ್

ಇಲ್ಲೂ ಕೂಡ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ; ವಿಜಯವಾಣಿ ವಿಶೇಷ ವರದಿ ಉಲ್ಲೇಖಿಸಿ ಸರ್ಕಾರದ ವಿರುದ್ಧ R Ashok ವಾಗ್ದಾಳಿ

ಬೆಂಗಳೂರು: ಸರ್ಕಾರ ರಾಜ್ಯವನ್ನ ಲೂಟಿ ಮಾಡಲು ಮತ್ತೊಂದು ಅಡ್ಡದಾರಿ ಹಿಡಿಯಲು ಹೊರಟಿದೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್ (R Ashok) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಜಯವಾಣಿಯಲ್ಲಿ ಪ್ರಕಟವಾಗಿರುವ ವಿಶೇಷ ವರದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ಆರ್. ಅಶೋಕ್ (R Ashok), ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲು ಪಾಲಾಗಿ, ಅಧಿಕಾರ ಕಳೆದುಕೊಳ್ಳಲು ಕಾರಣವಾದ ಬಹುಕೋಟಿ Liquor Scam ಮಾದರಿಯಲ್ಲೇ ಕರ್ನಾಟಕದಲ್ಲೂ ಅಬಕಾರಿ ಹಗರಣವೊಂದು ಸಂಭವಿಸುವ ಮುನ್ಸೂಚನೆ ಕಾಣುತ್ತಿದೆ.

ಅಸ್ತಿತ್ವದಲ್ಲೇ ಇಲ್ಲದ ಮದ್ಯದ ಅಂಗಡಿಗಳನ್ನು ಕಾನೂನುಬಾಹಿರವಾಗಿ ಹರಾಜು ಹಾಕಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯವನ್ನ ಲೂಟಿ ಮಾಡಲು ಮತ್ತೊಂದು ಅಡ್ಡದಾರಿ ಹಿಡಿಯಲು ಹೊರಟಿದೆ ಎಂದು ವಿಜಯವಾಣಿಯಲ್ಲಿ ಪ್ರಕಟವಾಗಿರುವ ವಿಶೇಷ ವರದಿಯನ್ನು ಉಲ್ಲೇಖಿಸಿ ಆರ್. ಅಶೋಕ್ (R Ashok) ಟ್ವೀಟ್​ ಮಾಡಿದ್ದಾರೆ.