ನ್ಯೂಸ್

ರಾಜ್ಯದ ಇತಿಹಾಸದಲ್ಲಿಯೇ ಅತಿ ಭಂಡ, ರೈತ ಹಂತಕ ಸರ್ಕಾರ ನಿಮ್ಮದು: ಆರ್​. ಅಶೋಕ ವಾಗ್ದಾಳಿ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಅತೀ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿಎಂ ಸಿದ್ದರಾಮಯ್ಯ ಸರ್ಕಾರ ಎಂದು ವಿಪಕ್ಷ ನಾಯಕ ಆರ. ಅಶೋಕ ವ್ಯಂಗ್ಯವಾಡಿದ್ದಾರೆ.

"ರೈತ ಹಂತಕ ಕಾಂಗ್ರೆಸ್​ ಸರ್ಕಾರದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ. ಪರಿಹರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅವಹೇಳನ ಮಾಡುತ್ತಾ, ರೈತರಿಗೆ ಸಿಗಬೇಕಾದ ಪರಿಹಾರ ಕೊಡದೇ ಮೀನಮೇಷ ಎಣಿಸುತ್ತಾ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರ ರೈತರನ್ನು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ" ಎಂದು ದೂರಿದ್ದಾರೆ.

"ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು" ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಆರ್​. ಅಶೋಕ, ಸಿಎಂ ಸಿದ್ದರಾಮಯ್ಯ ಆಡಳಿತ ಕುರಿತು ಸರಣಿ ಆರೋಪಗಳನ್ನು ಮಾಡುತ್ತಿದ್ದಾರೆ.